ಹೊಸಪೇಟೆ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ
ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಬಿ.ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಬಾಲಕ ಅಭ್ಯರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಸೇನೆಗೆ ಸೇರಲು ಅಗತ್ಯ ಪೂರ್ವ ಸಿದ್ದತೆ, ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲಾಗುತ್ತದೆ.
10ನೇ ತರಗತಿಯಲ್ಲಿ ಉತ್ತೀರ್ಣರಾದ, 2006 ಜು.1ರ ನಂತರ ಜನಿಸಿದ 21ವರ್ಷದೊಳಗಿನ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಮೂಲಕ ಅರ್ಜಿ ನಮೂನೆ ಪಡೆದು ಸೆ.15ರೊಳಗೆ ಸಲ್ಲಿಸಬೇಕು.
ತರಬೇತಿ ನೀಡುವ ಸ್ಥಳಗಳು:
ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ತಾವು ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ದಕ್ಷಿಣ ಕನ್ನಡ ದೂ.0824-2225078, ಉಡುಪಿ ದೂ.0820-2574881, ಉತ್ತರ ಕನ್ನಡ ದೂ.08382-226589 ಅಥವಾ ಕೇಂದ್ರ ಕಚೇರಿ ಮೊ.8050770004 ಸಂಖ್ಯೆಗೆ ಸಾರ್ವಜನಿಕ ರಜೆ ದಿನಗಳನ್ನು ಹೊರತು ಪಡಿಸಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು.