ನವದೆಹಲಿ: ಕಾಂಗ್ರೆಸ್ನ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾದರೆ ಒಂದು ಷರತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿನ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳ್ಳದೆ ತಾನು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತುಕತೆ ನಡೆದಿದೆ, ಆದರೆ ಸೀಟುಗಳ ಬಗ್ಗೆ ಇನ್ನೂ ಅಂತಿಮ ಒಪ್ಪಂದಕ್ಕೆ ಬಂದಿಲ್ಲ ಎನ್ನಲಾಗುತ್ತಿದೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಮೇಥಿಯಲ್ಲಿ ಮತ್ತೆ ರಾಜಕೀಯ ಬಿಸಿ ಏರುತ್ತಿದೆ. ಇಂದು ಅಮೇಥಿ ಮಾಜಿ ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯೊಂದಿಗೆ ಬಹಳ ದಿನಗಳ ನಂತರ ಅಮೇಥಿಗೆ ಬರುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸಚಿವೆ ಹಾಗೂ ಸಂಸದೆ ಸ್ಮೃತಿ ಇರಾನಿ ಕೂಡ ತಮ್ಮ ಸಂಸದೀಯ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾತನಾಡಿ, ಭಾರತ್ ಜೋಡೋ ನ್ಯಾಯ ಯಾತ್ರೆಯ 37ನೇ ದಿನ ಇಂದು. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಬಾಬುಗಂಜ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ರಾತ್ರಿ ನಾವು ಅಮೇಥಿಯಲ್ಲಿ ಉಳಿಯುತ್ತೇವೆ. ಅಖಿಲೇಶ್ ಯಾದವ್ ಕೂಡ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದಿದ್ದರು.