ಹೊಸದಿಲ್ಲಿ: ಭಾರತ ಆತಿಥ್ಯ ವಹಿಸಿರುವ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಬೇಕಾಯಿತು. ಇದಾದ ನಂತರ ಟೀಂ ಇಂಡಿಯಾ ಆಟಗಾರರ ಜೊತೆಗೆ ಇಡೀ ದೇಶವೇ ದುಃಖಿತವಾಯಿತು. ಗೆಲುವಿನ ಸಮೀಪಕ್ಕೆ ಬಂದ ಭಾರತ ಫೈನಲ್‌ನಲ್ಲಿ ಸೋತಾಗ ಎಲ್ಲರಿಗೂ ಬೇಸರವಾಯಿತು. ಹೀಗಿರುವಾಗ ಪಂದ್ಯದ ಬಳಿಕ ಸ್ವತಃ ಪ್ರಧಾನಿ ಮೋದಿ ಭಾರತ ತಂಡದ ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಪ್ರಧಾನಿ ಮೋದಿ ಡ್ರೆಸ್ಸಿಂಗ್ ರೂಂನಲ್ಲಿ ಭಾರತ ತಂಡದ ಆಟಗಾರರನ್ನು ಭೇಟಿ ಮಾಡಿ ಧೈರ್ಯ ತುಂಬಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಲ್ಲದೇ ಭಾರತದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿಯನ್ನೂ ಪ್ರಧಾನಿ ಮೋದಿ ಅಪ್ಪಿಕೊಂಡರು. ಈ ವೇಳೆ ಪ್ರಧಾನಿ ಮೋದಿ ಶಮಿಯನ್ನು ಸಂತೈಸಿದರು. ಈ ಚಿತ್ರವನ್ನು ಸ್ವತಃ ಶಮಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ಬರೆದ ಶೀರ್ಷಿಕೆಯಲ್ಲಿ, ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ವಿಶೇಷವಾಗಿ ಡ್ರೆಸ್ಸಿಂಗ್ ರೂಮ್‌ಗೆ ಬಂದು ನಮ್ಮನ್ನು ಹುರಿದುಂಬಿಸಿದ್ದಕ್ಕಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುತ್ತೇನೆ ನಾವು ಹಿಂತಿರುಗುತ್ತೇವೆ ಎಂದು ಶಮಿ ಹೇಳಿದ್ದಾರೆ.
[vc_row][vc_column]
BREAKING NEWS
- ಮುರುಘಾ ಶರಣರ ಕೈಗೆ ಬಂತು ಮಠದ ಅಧಿಕಾರ.!
- ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು ಅರೆಸ್ಟ್
- ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
- ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ
- ‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ
- ಲಾರಿ – ಟಾಟಾ ಏಸ್ ನಡುವೆ ಭೀಕರ ಅಪಘಾತ-ನಾಲ್ವರು ಸಾವು
- ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ
- ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ
- ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?
- ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋಗಿದ್ಯಾ..? ಡೂಪ್ಲಿಕೇಟ್ ಕಾರ್ಡ್ ಪಡೆಯಲು ಹೀಗೆ ಮಾಡಿ