ಭಾರೀ ಮಳೆಗೆ ಸೂರತ್‍ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಸಾವು

WhatsApp
Telegram
Facebook
Twitter
LinkedIn

ಗಾಂಧಿನಗರ: ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ.

ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಕಟ್ಟಡದ ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

8 ವರ್ಷಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಈ ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿತ್ತು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon