ಮಂಗಳೂರು: ಸೋಮವಾರ ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ನಗರ ಪ್ರದೇಶದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.ಭಾರೀ ಮಳೆಗೆ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶ ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಪಂಪ್‌ವೆಲ್ ಮೇಲ್ಸೇತುವೆ ಕೆಳಗೆ ಮೊಣಕಾಲು ಎತ್ತರಕ್ಕೆ ನೀರು ನಿಂತಿದ್ದು ನಗರದ ಕಡೆ ಸಂಚರಿಸುವ ವಾಹನಗಳು ಜಂಕ್ಷನ್‌ನಲ್ಲಿ ಸಿಲುಕಿಕೊಂಡಿವೆ.ನಗರದ ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ದುರಸ್ತಿಗಾಗಿ ಮ್ಯಾನ್ ಹೋಲ್ ಅಗೆದಿಟ್ಟುರುವುದ್ದರಿಂದ ಭಾರೀ ಮಳೆಯಿಂದಾಗಿ ಗಲೀಜು ನೀರಿನ ಜತೆ ಮಳೆ ನೀರು ಸುತ್ತಮುತ್ತಲಿನ ಬ್ಯಾಂಕ್, ಮೆಡಿಕಲ್‌ನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ.ಇಂಡಿಯನ್ ಬ್ಯಾಂಕ್‌ನೊಳಗೆ ನೀರು ನುಗ್ಗಿ ಬ್ಯಾಂಕ್ ಸಿಬ್ಬಂದಿಗಳು ಕಡತಗಳು ಹಾಗೂ ಇನ್ನು ಪಕ್ಕದಲ್ಲಿದ್ದ ಎಟಿಎಂ ಮಷಿನ್‌ನಲ್ಲಿದ್ದ ಹಣವನ್ನು ಕೂಡ ಸ್ಥಳಾಂತರಿಸಿದ್ದಾರೆ.ಪಕ್ಕದಲ್ಲಿದ್ದ ಹೋಟೇಲ್ ಹಾಗೂ ಮೆಡಿಕಲ್‌ಗಳಿಗೂ ಗಲೀಜು ನೀರು ನುಗ್ಗಿ ಸಮಸ್ಯೆಯಾಗಿದೆ. ಕಳೆದ ಹಲವಾರು ದಿನಗಳಿಂದ ಮ್ಯಾನ್ ಹೋಲ್ ದುರಸ್ತಿಯಾಗುತ್ತಿದ್ದು ಇನ್ನು ಕೂಡ ಪೂರ್ಣವಾಗಿಲ್ಲ ಜತೆಗೆ ದಿನನಿತ್ಯ ಈ ಭಾಗದಲ್ಲಿ ಸಂಚರಿಸುವ ಮತ್ತು ವ್ಯಾಪಾರ ವ್ಯವಹಾರ ನಡೆಸುವ ಜನರಿಗೆ ಗಲೀಜು ನೀರಿನ ದುರ್ನಾತದಿಂದ ಸಮಸ್ಯೆಯಾಗುತ್ತಿದೆ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ