ತಮಿಳುನಾಡಿನ ವೆಂಬಕೊಟ್ಟೆನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದೆ.
ಈ ಅಪಘಾತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ಇನ್ನಷ್ಟು ಜನ ಗಾಯಗೊಂಡಿದ್ದಾರೆ ಎಂದು ಮಾಹಿತಿಯಿದೆ.
ಸ್ಫೋಟದಿಂದ ಪಟಾಕಿ ಫ್ಯಾಕ್ಟರಿ ಬಳಿಯ ನಾಲ್ಕು ಕಟ್ಟಡಗಳಿಗೆ ಹಾನಿಯಾಗಿವೆ, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ
ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ