ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಭಾಷಣದ ಭರಾಟೆಯಲ್ಲಿ ಬಿಜೆಪಿ ಎನ್ನುವ ಬದಲು ಕಾಂಗ್ರೆಸ್ ಎನ್ನುತ್ತಾ ಯಡವಟ್ಟು ಮಾಡಿಕೊಂಡಿದ್ದಾರೆ. ಈ ಅನ್ನಭಾಗ್ಯ ಕಾರ್ಯಕ್ರಮಕ್ಕೆ ಗುಲ್ಲು ಎಬ್ಬಿಸಿದ್ರು. ಬಿಜೆಪಿಯವರು ಬಡವರ ವಿರೋಧಿಗಳು ಅನ್ನೋದಕ್ಕೆ ಇದೇ ಒಂದು ನಿದರ್ಶನ. FCI ನವರು ನಮಗೆ ಹೆಚ್ಚುವರಿಯಾಗಿ ಬೇಕಾಗಿದ್ದ 2 ಲಕ್ಷದ 29 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನ ಕೊಡ್ತೀವಿ ಅಂತಾ ಒಪ್ಪಿಕೊಂಡಿದ್ರು. ಕೇಂದ್ರದ ಕಾಂಗ್ರೆಸ್ ಸರ್ಕಾರ FCIನವರಿಗೆ ಹೇಳಿ ಅಕ್ಕಿ ಕೊಡದಂತೆ ಮಾಡಿದ್ರು. ಅಕ್ಕಿಯಲ್ಲೂ ರಾಜಕೀಯ ಮಾಡಿದ್ರು ಎಂದರು. ಕೂಡಲೇ ಸಭೆಯಲ್ಲಿದ್ದವರು ಕೂಗಾಡುತ್ತಿದ್ದಂತೆ ಕಾಂಗ್ರೆಸ್ ಅಲ್ಲ ಬಿಜೆಪಿ ಸರ್ಕಾರ ಅಕ್ಕಿಯಲ್ಲೂ ರಾಜಕೀಯ ಮಾಡಿದೆ ಎಂದು ಗುಡುಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ 200 ಯೂನಿಟ್‌ವರೆಗೆ ವಿದ್ಯುತ್ ನಾವು ಫ್ರೀ ಆಗಿ ಕೊಡ್ತಿದ್ದೇವೆ. ಈಗಾಗಲೇ 1 ಕೋಟಿ 21 ಸಾವಿರ ಜನ ಗೃಹಜ್ಯೋತಿಗಾಗಿ ನೊಂದಾಯಿಸಿ ಕೊಂಡಿದ್ದಾರೆ ಅವರೆಲ್ಲ ಇದರ ಲಾಭ ಪಡೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ