Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

0

ಚಿತ್ರದುರ್ಗ: ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಈ ಅಪಘಾತ ನಡೆದಿದ್ದು ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.