ಬೆಳಗಾವಿ:ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯಯಾಗಿರುವ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ಸೋಮನಗೌಡ (44), ದೀಪಾ (42), ನವೀನ (14), ವಿದ್ಯಾ (13), ಬಸನಗೌಡ ನಿರ್ವಾಣಿ (9 ತಿಂಗಳು) ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿತ್ತು. ಈ ವೇಳೆ ಗ್ಯಾಸ್ ವಾಸನೆಗೆ ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯ ಹಂಚು ಹಾರಿ ಹೋಗಿದೆ. ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.