Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು: ಗ್ರಾಮ ಪಂಚಾಯತ್‍ಗಳ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ

0

ಮಂಗಳೂರು: ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಪ್ಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಮದ್ಯ ಮಾರಾಟದ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು, ಹೋಟೆಲ್‍ಗಳು, ನಾನ್ ಪ್ರೊಪ್ರೈಟರ್‍ಗಳಲ್ಲಿ ಹಾಗೂ ಸ್ಟಾರ್ ಹೋಟೆಲ್‍ಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಮಾಡುವುದು ನಿಷೇಧಿಸಲಾಗಿರುತ್ತದೆ.

Leave A Reply

Your email address will not be published.