ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
ಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಮಧು ಬಂಗಾರಪ್ಪ
ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅವರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.