ಬೆಂಗಳೂರು: ಮಂಗಳೂರು, ಸೇರಿ ರಾಜ್ಯದ ನಾಲ್ಕು ಕಡೆ ಮುಂದಿನ ಐದು ವರ್ಷಗಳಲ್ಲಿ ಹಜ್ ಭವನ ನಿರ್ಮಾಣವಾಗಲಿದೆ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.ಬೆಂಗಳೂರಿನ ಯಲಹಂಕದ ಹಜ್ ಭವನದಲ್ಲಿ ನಡೆದ ಹಜ್ ಯಾತ್ರಿಕರ ವಿಮಾನಯಾನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಮಂಗಳೂರು, ಕಲಬುರಗಿ, ರಾಯಚೂರು, ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣ ಆಗಲಿದೆ. ಸಿದ್ದರಾಮಯ್ಯ ಹಿಂದಿನ ಬಾರಿ ಸಿಎಂ ಆಗಿದ್ದಾಗ 100 ಕೋಟಿ ಅನುದಾನ ನೀಡಿದ್ದರು. ಈ ಬಾರಿ ಅಧಿಕಾರಕ್ಕೆ ಬಂದ ಎರಡೇ ದಿನಕ್ಕೆ ಹಜ್ ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಿದ್ದಾರೆ. ಮಾತ್ರವಲ್ಲದೇ ಮುಂದೆ ಒಟ್ಟು 5 ಸಾವಿರ ಕೋಟಿ ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರುಗ್ಯಾರಂಟಿ ಅನುಷ್ಠಾನದಿಂದ ಆರ್ಥಿಕ ಹೊರೆಯಾಗಿ 5 ಸಾವಿರ ಕೋಟಿ ಕಡಿತ ಮಾಡಬಹುದು ಎಂಬ ಆರೋಪದ ಬಗ್ಗೆ ಮಾತನಾಡಿದ ಸಚಿವರು, “5 ಸಾವಿರ ಕೋಟಿಗಿಂತ ಕಡಿಮೆ ಮಾಡಬಾರದು. ಅನುದಾನ ಕಡಿಮೆ ಮಾಡಬಾರದೆಂದು ಮುಸ್ಲಿಂ ಮುಖಂಡರ ಬೇಡಿಕೆ ಇದೆ. ಯಾವುದೇ ಕಾರಣಕ್ಕೂ ಅನುದಾನ ಕಡಿಮೆ ಮಾಡಬಾರದು” ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು.
[vc_row][vc_column]
BREAKING NEWS
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
- ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
- ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ- ಪ್ರಯಾಣಿಕರ ಪರದಾಟ
- ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
- ರಾಜ್ಯದ ಮುಖ್ಯ ಕಾರ್ಯದರ್ಶಿ ಅಜನೀಶ್ ಗೋಯೆಲ್.!
- ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!