ಮಂಗಳೂರು: ಬಿಜೆಪಿ ಸೌಜನ್ಯಾ ಪರ ಹೋರಾಟಕ್ಕಿಳಿದಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರನೊಳಗೊಂಡು ಬೆಳ್ತಂಗಡಿಯಲ್ಲಿ 27ರಂದು ಪ್ರತಿಭಟನೆ ನಡೆಯಲಿದೆ. ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, ಎಸ್‌ಡಿಎಂ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಪೊಲೀಸ್ ತನಿಖೆಯಾಗಿ ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆಯೂ ಆಗಿದೆ. ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿಯಲ್ಲ ಎಂದು ಹೇಳಿದೆ. ಅಂದು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು. ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ ಎಂದು ಹೇಳಿದರು. ಹಂತಕರ ಪತ್ತೆಯಾಗಿ ಸೌಜನ್ಯಾ ಕುಟುಂಬಕ್ಕೆ ನ್ಯಾಯ ದೊರಕಬೇಕು. ಈ ಬಗ್ಗೆ ನಾವು ಆಗಷ್ಟ್ 27ರಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆ ಮರುದಿನ ಬಿಜೆಪಿ ಶಾಸಕರ ನಿಯೋಗ ಸಿಎಂ ಮತ್ತು ರಾಜ್ಯಪಾಲರಿಗೆ ಪ್ರಕರಣದ ಮರುತನಿಖೆಗೆ ಮನವಿ ಮಾಡುತ್ತದೆ. ಸೌಜನ್ಯಾ ಕೇಸ್‌ನಲ್ಲಿ ಸಿಬಿಐಗೆ ಹೋದರೂ ಆರೋಪಿಗಳು ಯಾರೆಂದು ಇನ್ನೂ ಗೊತ್ತಾಗಿಲ್ಲ. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಚಾರವಿಲ್ಲ. ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕನ್ನೋದಷ್ಟೇ ನಮ್ಮ ಉದ್ದೇಶ ನಳಿನ್ ಕುಮಾರ್ ಕಟೀಲು ಹೇಳಿದರು.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ