ಮಂಡ್ಯ: ಹಿಂದಿ ಹಾಗೂ ತಮಿಳು ಕಿರುತೆರೆಯಲ್ಲಿ ನಟನೆ ಮಾಡಿರುವ 24 ವರ್ಷದ ಯುವ ಕಲಾವಿದ ಹೃದಯಾಘಾತದಿಂದ ಮೃತಟಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಪವನ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಪವನ್ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದ ನಿವಾಸಿ ಯವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.
ಮೃತ ಪವನ್ ಹಿಂದಿ ಹಾಗೂ ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ಹೊರಹೊಮ್ಮುತ್ತಿದ್ದರು.
ಅಲ್ಲದೆ ಬೆಳ್ಳಿ ತೆರೆ ಚಿತ್ರಗಳಲ್ಲಿ ಅಭಿನಯಿಸುವ ಕನಸು ಕೂಡ ಕಂಡಿದ್ದರು.
ಆದರೆ ಪವನ್ ಗುರುವಾರ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಂದು ಹುಟ್ಟೂರಿನಲ್ಲಿ ಯುವನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ.