ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳಾಗಿದ್ದಾರೆ.
‘ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ, ಪ್ರಧಾನಿ ಹುದ್ದೆಯಲ್ಲಿ ಆಸಕ್ತಿ ಇಲ್ಲ’ – ಮಲ್ಲಿಕಾರ್ಜುನ ಖರ್ಗೆ
ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಉರ್ವಾ ಠಾಣಾ ಪೊಲೀಸರು ತಿಳಿಸಿದ್ದಾರೆ.