ಇಂಫಾಲ: ತಿಂಗಳುಗಳಿಂದ ಹಿಂಸಾಚಾರದ ಕೂಪವಾಗಿರುವ ಮಣಿಪುರದಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಪೂರ್ವ ಇಂಫಾಲ್ನಲ್ಲಿ ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಹಣೆಗೆ ಗುಂಡಿಕ್ಕಿದ್ದಾರೆ. ಬಳಿಕ ಮೃತ ಮಹಿಳೆಯ ಮುಖವನ್ನು ವಿರೂಪಗೊಳಿಸಿದ್ದಾರೆ. ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ.