ಮದುವೆ ಸಮಾರಂಭದಲ್ಲಿ ಐಸ್​ಕ್ರೀಂ ಸೇವಿಸಿ 80 ಜನರು ಅಸ್ವಸ್ಥ.!

WhatsApp
Telegram
Facebook
Twitter
LinkedIn

 

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ಕ್ರೀಂ ಸೇವಿಸಿ 80 ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣದ ಟಿಪ್ಪುನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 80 ಜನರಲ್ಲಿ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 30 ಜನರನ್ನು ಚನ್ನಪಟ್ಟಣ ಹಾಗೂ ರಾಮನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥಗೊಂಡವರಲ್ಲಿ ಬಹುತೇಕರು ಮಕ್ಕಳಿದ್ದಾರೆ. ಮದುವೆ ಸಮಾರಂಭದಲ್ಲಿ ಊಟದ ಬಳಿಕ ಐಸ್​ಕ್ರೀಂ ತಿಂದು ತಮ್ಮ ಊರುಗಳಿಗೆ ತೆರಳುತ್ತಿದ್ದರು. ದಾರಿ ಮಧ್ಯೆ ವಾಂತಿ, ಭೇದಿ ಶುರುವಾಗಿದೆ. ಸಮಾರಂಭದಲ್ಲಿ ಅವಧಿ ಮೀರಿದ ಐಸ್​ಕ್ರೀಂ ನೀಡಿರುವ ಆರೋಪ ಕೇಳಿಬಂದಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಗಡಿಯ ವರ, ಚನ್ನಪಟ್ಟಣ ವಧು ನಡುವೆ ವಿವಾಹ ನಡೆದಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon