ಕರ್ನಾಟಕದಲ್ಲಿ 85 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 5.7 ಲಕ್ಷ ಹಿರಿಯ ನಾಗರಿಕರು ಮತ್ತು 6.13 ಲಕ್ಷ ವಿಕಲಚೇತನರು ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ ಎಂಬುದು ಚುನಾವಣಾ ಆಯೋಗದ ಅಂಕಿ ಅಂಶಗಳಿಂದ ತಿಳಿದುಬಂದಿದೆ.
ಮನೆಯಿಂದಲೇ ಮತದಾನ ಮಾಡಲು ಬೇಕಾದ ಅರ್ಜಿ ನಮೂನೆ 12ಡಿ ವಿತರಿಸುವ ಪ್ರಕ್ರಿಯೆಯನ್ನು ಚುನಾವಾಣಾ ಆಯೋಗದ ಅಧಿಕಾರಿಗಳು ಈಗಾಗಲೇ ಆರಂಭಿಸಿದ್ದಾರೆ.
ಅರ್ಜಿ ನಮೂನೆ 12ಡಿ ಮೂಲಕ ಅರ್ಹ ಮತದಾರರು ಮನೆಯಿಂದ ಮತ ಚಲಾಯಿಸಲು ಸಹಾಯಕ ಚುನಾವಣಾಧಿಕಾರಿಗೆ ಮನವಿ ಮಾಡಲು ಅವಕಾಶ ನೀಡಲಾಗಿದೆ.
![](https://bcsuddi.com/wp-content/uploads/2025/02/WhatsApp-Image-2025-02-05-at-6.18.34-PM.jpeg)