ಚಿಕ್ಕಬಳ್ಳಾಪುರ: ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಮನೆ ಮಾಲಕಿ ಯನ್ನು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಪ್ರಮೀಳಮ್ಮ ಎಂಬುವವರ ಮನೆಯ ಕಾಂಪೌಂಡ್ ನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದು ಖಚಿತ ಮಾಹಿತಿ ಮೇರೆಗೆ ಚಿಂತಾಮಣಿ ಉಪ ವಿಭಾಗದ ಎಸಿಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ ದಾಳಿ ನಡೆಸಿ ಬರೋಬ್ಬರಿ 66 ಸಾವಿರ ರೂಪಾಯಿ ಮೌಲ್ಯದ 11.5 ಕೆಜಿ ಯಷ್ಟು ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಮನೆ ಮಾಲಕಿ ಪ್ರಮೀಳಮ್ಮರನ್ನು ವಶಕ್ಕೆ ತೆಗೆದುಕೊಂಡು ಆಕೆಯ ವಿರುದ್ಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ