Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ – ಆರೋಪಿ ಅರೆಸ್ಟ್

0

ಬೆಂಗಳೂರು: ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಎಂದು ಗುರುತಿಸಲಾಗಿದೆ.

ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್​ ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಆದರೆ ಇದಕ್ಕೆ ಸಿಬ್ಬಂದಿ ಮಸೀದಿಯಲ್ಲಿ ಮಲಗಲು ಅವಕಾಶವಿಲ್ಲ ಎಂದಿದ್ದಾರೆ.

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ

ಇನ್ನು ಇದರಿಂದ ಬೇಸರಗೊಂಡ ಸೈಯದ್ ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂದು ಹುಸಿ ಕರೆ ಮಾಡಿದ್ದಾನೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಬಾಂಬ್​ ಇರಲಿಲ್ಲ. ಹುಸಿ ಬಾಂಬ್​ ಕರೆಯೆಂದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Leave A Reply

Your email address will not be published.