ಬೆಂಗಳೂರು; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಧ್ರುವನಾರಾಯಣ ಅವರ ಆಕಸ್ಮಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಚಿತ್ರದುರ್ಗ ಮಾಜಿ ಸಂಸದ ಚಂದ್ರಪ್ಪ ಅವರನ್ನು ನೇಮಕ ಮಾಡಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ, 2019ರಲ್ಲಿ ನಾರಾಯಣಸ್ವಾಮಿ ವಿರುದ್ಧ ಸೋಲುಕಂಡಿದ್ದರು.