ಬೆಂಗಳೂರು : ಮೀಸಲಾತಿ (Reservation) ಗೊಂದಲ ಬಗೆಹರಿಸುವುದಾಗಿ ಸಿಎಂ ಸಿದ್ದರಾಮಯ್ಯ ಇಂದು ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ವರ್ಗಗಳ ಮಹಾ ಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಎಲ್ಲಾ ಮೀಸಲಾತಿ ಗೊಂದಲ ಬಗೆಹರಿಸುವುದಾಗಿ ಶೋಷಿತ ವರ್ಗಗಳ ಒಕ್ಕೂಟದ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹಿಂದಿನ ಬಿಜೆಪಿ ಸರ್ಕಾರ (BJP Govt) ಮಾಡಿರುವ ಎಲ್ಲಾ ಮೀಸಲಾತಿ ಗೊಂದಲಕ್ಕೆ ತೆರೆ ಎಳೆಯುತ್ತೇವೆ, ಇಲ್ಲದಿದ್ದರೆ ಸಾಮಾಜಿಕ ನ್ಯಾಯ ಒದಗಿಸಲಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಹಾಸನ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 35ಕ್ಕೂ ಹೆಚ್ಚು ಸೈನಿಕರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಿಂದಿನ ಬಿಜೆಪಿ ಸರ್ಕಾರ ಮಾಡಿರುವ ಎಲ್ಲಾ ಮೀಸಲಾತಿ ಗೊಂದಲಕ್ಕೆ ತೆರೆ ಎಳೆಯುತ್ತೇವೆ, ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ (Social justice)ಒದಗಿಸಲಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.