ಬೆಳಗಾವಿ: ಮುಂಗಾರು ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳೆಂದು ಎಂದು ಘೋಷಣೆ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆ ಹಿನ್ನೆಲೆ ಬರಪೀಡಿತ ಎಂದು ಘೋಷಣೆ ಮಾಡಬೇಕಿದೆ. ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇವೆ.ಆದಷ್ಟು ಬೇಗ ಬರಪೀಡಿತ ಎಂದು ಸಿಎಂ ಘೋಷಣೆ ಮಾಡಲಿದ್ದಾರೆ ಎಂದರು.
ಗ್ಯಾನವ್ಯಾಪಿ ವೈಜ್ಞಾನಿಕ ಸಮೀಕ್ಷೆಯ ಕೋರ್ಟ್ ತೀರ್ಪು ಜುಲೈ 21ಕ್ಕೆ ಪ್ರಕಟ
ಪ್ರಸಕ್ತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆ ಬಂದಿಲ್ಲ. ನದಿಗಳಲ್ಲಿ ನೀರು ಇಲ್ಲದೇ ನೀರಾವರಿ ಪ್ರದೇಶದ ಬೆಳೆಗಳು ಕೂಡಾ ಒಣಗುತ್ತಿವೆ. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಹಲವು ರೈತ ಸಂಘಟನೆಗಳು ಸರ್ಕಾರ ಆಗ್ರಹಿಸುತ್ತಿದೆ.