ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಬೃಹನ್ ಮುಂಬೈ ಮಹಾನಗರ ಪಾಲಿಕೆ(BMC)ಯ ವರದಿಯ ಪ್ರಕಾರ, ಉತ್ತರ ಮುಂಬೈನ ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 8 ರಿಂದ ಸಂಜೆ 6ರ ನಡುವೆ 100 ಮಿಮೀ ಗಿಂತ ಹೆಚ್ಚು ಮಳೆಯಾಗಿದೆ. ಪಕ್ಕದ ಥಾಣೆಯಲ್ಲಿ, ಮಂಗಳವಾರ ಸಂಜೆ ಒಂದು ಅಂತಸ್ತಿನ ‘ಚಾಲ್'(ಹಳೆಯ ವಠಾರ)ನ ಒಂದು ಭಾಗ ಕುಸಿದು 36 ವರ್ಷದ ಮಹಿಳೆ ಗಾಯಗೊಂಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಮುಂಬೈನಲ್ಲಿ ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ
[vc_row][vc_column]
BREAKING NEWS
- ಚಿಕ್ಕಮಗಳೂರು: ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ ಪೊಲೀಸರು
- ಶಾಲೆಗಳಿಗೆ ಬಾಂಬ್ ಬೆದರಿಕೆ : ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ – ಖಾರಿಜೈಟ್ಸ್ ಹೆಸರಲ್ಲಿ ಇ-ಮೇಲ್
- ಮಲಯಾಳಂನ ಖ್ಯಾತ ನಟಿ ಆರ್.ಸುಬ್ಬಲಕ್ಷ್ಮಿ ನಿಧನ
- ಎಚ್ಐವಿ ಸೋಂಕಿತ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿ ಕರ್ನಾಟಕ
- ಹತ್ತೇ ನಿಮಿಷದಲ್ಲಿ ಬ್ಯಾಂಕ್ ನಿಂದ 18.85 ಕೋಟಿ ರೂ. ದರೋಡೆ.!
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ