ದಾವಣಗೆರೆ : ಪ್ರಸಕ್ತ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪೆÇ್ಲೀಮಾ ಮತ್ತು ವೃತ್ತಿಪರ ಪದವಿ ವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೆÉೀರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 31 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂ.ಸಂ: 08182-220925 ಸಂಪರ್ಕಿಸಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

































