ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಮಾಡಿ ಅನೇಕ ತಿಂಗಳೇ ಕಳೆದಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ಷಾಂತರ ಮಹಿಳೆಯರು ಫಲಾನುಭವಿಯಾಗಲು ಕಚೇರಿಗೆ ಅಲೆದಾಡುತ್ತಿದ್ದಾರೆ. ಆದರೆ ಗದಗ ಜಿಲ್ಲೆಯಲ್ಲಿ ನಿಧನ ಹೊಂದಿರುವ ಮಹಿಳೆಯೊಬ್ಬರು ಈ ಯೋಜನೆ ಫಲಾನುಭವಿಯಾಗಿದ್ದಾರೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಜಗಾಪುರ ಗ್ರಾಮದ ಮೃತ ಮಹಿಳೆ ನಿಂಗವ್ವ ಶಿವಪ್ಪ ಹೂಲಿ ಖಾತೆಗೆ ಪ್ರತಿತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿದ್ದು, ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.