Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮೈಸೂರು ಅರಮನೆಯಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ : ಟಿಎಸ್ ಸುಬ್ರಮಣ್ಯ ಆದೇಶ

0

ಮೈಸೂರು: ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

Leave A Reply

Your email address will not be published.