ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ KSRTC ಬಸ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಗ್ರಾ.ಪಂ. ಸದಸ್ಯ(Grama Panchay Member) ಮೃತಪಟ್ಟಿದ್ದಾರೆ.
ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು ಕಾರಿನಲ್ಲಿದ್ದ ಭಾಸ್ಕರ್ ಪತ್ನಿ, ತಾಯಿ, ಪುತ್ರನಿಗೆ ಗಾಯಗಳಾಗಿವೆ. ಮೂವರು ಗಾಯಾಳುಗಳು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗ್ರಾ.ಪಂ. ಸದಸ್ಯ ತಮ್ಮ ಕುಟುಂಬದ ಜೊತೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.