ಬೆಂಗಳೂರು : ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಮೊದಲ ದಿನವೇ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ಸೂಚಿಸಿದ್ದಾರೆ. ಸರ್ಕಾರ ರಚನೆಯಾಗಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಿದ ನಂತರ ಮೊದಲನೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಸಖಿ ಯೋಜನೆಗಳನ್ನು ಎಷ್ಟೇ ಹಣ ಖರ್ಚಾದರೂ ಜಾರಿಗೊಳಿಸುವುದಾಗಿ ತಿಳಿಸಿದರು. ಎಲ್ಲ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸುವಂತಹದ್ದಲ್ಲ. 5 ವರ್ಷಗಳಲ್ಲಿ ಈಡೇರಿಸುತ್ತೇವೆ. 5 ಗ್ಯಾರಂಟಿಗಳನ್ನು ಜನತೆಗೆ ವಾಗ್ದಾನದ ರೂಪದಲ್ಲಿ ಕೊಟ್ಟಿದ್ದೆವು. ಮೊದಲ ಸಚಿವ ಸಂಪುಟ ಸಭೆಯಲ್ಲೇ 5 ಗ್ಯಾರಂಟಿ ಈಡೇರಿಸುವುದಾಗಿ ಭರವಸೆ ನೀಡಿದ್ದು, ಸಚಿವ ಸಂಪುಟದಲ್ಲಿ ನಿರ್ಣಯ ಪಡೆದು ಆದೇಶ ಹೊರಡಿಸುವುದಾಗಿ ಹೇಳಿದ್ದೆವು. ಅದರಂತೆ ಕ್ರಮ ಕೈಗೊಳ್ಳುತ್ತೇವೆ ಎಂದರು. ರಾಜ್ಯದ 5 ಕಾಂಗ್ರೆಸ್ ಗ್ಯಾರಂಟಿಗಳನ್ನು ನಾವು ಕೊಡಲು ಸಿದ್ಧರಾಗಿದ್ದೇವೆ. ಪ್ರತಿ ವರ್ಷ ಬಜೆಟ್ ಮಂಡಿಸುವಾಗ ಕಾಂಗ್ರೆಸ್ ಭರವಸೆಗಳನ್ನು ಇಟ್ಟುಕೊಂಡೇ ಬಜೆಟ್ ಮಾಡುತ್ತೇವೆ. ಗೃಹಜ್ಯೋತಿ- ಎಲ್ಲಾ ಮನೆಗಳಿಗೂ 200 ಯೂನಿಟ್ ಉಚಿತ ಕರೆಂಟ್ ಕೊಡುತ್ತೇವೆ. ಒಂದು ತಿಂಗಳಿಗೆ ಸುಮಾರು 1,200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ- ಪ್ರತಿ ಮನೆ ಯಜಮಾನಿಗೂ ಮಾಸಿಕ 2000 ರೂ. ಸಹಾಯಧನವನ್ನು ಅವರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಾಕುತ್ತೇವೆ.
[vc_row][vc_column]
BREAKING NEWS
- ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಇಡಬಾರದೆಂದು ಹೇಳಿಲ್ಲ -ಗೃಹ ಸಚಿವರ ಸ್ಪಷ್ಟನೆ
- ಶಾಸನ ಸಭೆಯ ಗೌರವ ಕಾಪಾಡಿ ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
- ಸಾಲಗಾರರಿಗೆ ಸಂತಸ ಸುದ್ದಿಯನ್ನು ನೀಡಿದ ಆರ್ಬಿಐ : ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧಾರ
- ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿ ಸಲ್ಲಿಸೋದು ಹೇಗೆ?
- ಬಿಜೆಪಿ ಕೋರ್ ಕಮಿಟಿ ಸಭೆ ಧಿಡೀರ್ ರದ್ದು
- ಭಾರತಕ್ಕೆ ಕಾದಿದೆ ಒಂದು ಗಂಡಾಂತರ.! – ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ
- ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!
- ಕೇರಳಕ್ಕೆ ಮುಂಗಾರು ಆಗಮನ -ಮಳೆ ಆರಂಭ
- ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ :31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ
- ಒಡಿಶಾದಲ್ಲಿ ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು – 6 ಮಂದಿ ಮೃತ್ಯು