Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಮೊಬೈಲ್ ಚಾರ್ಜ್​ಗೆ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಬಾಲಕ, ರಕ್ಷಿಸಲು ಹೋದ ತಾಯಿಯೂ ಮೃತ್ಯು

0

ಲಕ್ನೋ: ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಮೃತಪಟ್ಟಿದ್ದು, ಬಾಲಕನನ್ನು ರಕ್ಷಿಸಲು ಯತ್ನಿಸಿದಾಗ ಆತನ ತಾಯಿಗೂ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಈ ಬಗ್ಗೆ ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ಮಾತನಾಡಿ “ಭವಾನಿಪುರ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

ರೋಹಿತ್ ಜೈಸ್ವಾಲ್ (15) ಬಾಲಕ ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು.

ರಾತ್ರಿ ಎಚ್ಚರಗೊಂಡು ಮೋಬೈಲ್ ಚಾರ್ಜ್​ ಮಾಡಲು ಹೋಗಿದ್ದ, ಆ ವೇಳೆ ರೋಹಿತ್​ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ಕಂಡ ತಾಯಿ ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಆಕೆಯೂ ಕೂಡ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಂತರ ಕುಟುಂಬ ಸದಸ್ಯರು ಕೋಣೆಯಲ್ಲಿ ತಾಯಿ-ಮಗ ಇಬ್ಬರೂ ಶವವಾಗಿ ಬಿದ್ದಿರುವುದನ್ನು ನೋಡಿದ್ದಾರೆ. ಕುಟುಂಬದವರು ಶವಪರೀಕ್ಷೆಗೆ ನಿರಾಕರಿಸಿ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.