ಬೆಂಗಳೂರು: ಬೆಂಗಳೂರಿನಲ್ಲಿ ನಾಗರೀಕರು ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಅಸ್ಸಾಂನ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೊ ಚಿತ್ರೀಕರಿಸಿಕೊಂಡು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಯತ್ನಿಸಲಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಗೂ ಆರೋಪಿ ಶಾಹಿದ್‌ವುದ್ದೀನ್‌ಗೂ ಕೆಲ ತಿಂಗಳ ಹಿಂದೆಯಷ್ಟೇ ಪರಿಚಯವಾಗಿತ್ತು. ಇಬ್ಬರು ಮೊಬೈಲ್ ನಂಬರ್ ಬದಲಾಯಿಸಿಕೊಂಡು, ಪರಸ್ಪರ ಮಾತನಾಡುತ್ತಿದ್ದರು. ಪ್ರೀತಿಸಿ ಮದುವೆಯಾಗುವುದಾಗಿ ಹೇಳಿದ್ದ ಆರೋಪಿ, ಯುವತಿಯನ್ನು ಅಸ್ಸಾಂನಿಂದ ಬೆಂಗಳೂರಿಗೆ ಕರೆತಂದು ಮನೆಯೊಂದರಲ್ಲಿ ಇರಿಸಿದ್ದ. ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಅದರ ವಿಡಿಯೊ ಚಿತ್ರೀಕರಿಸಿಟ್ಟುಕೊಂಡಿದ್ದ. ಕೆಲ ದಿನಗಳ ನಂತರ, ವೇಶ್ಯಾವಾಟಿಕೆ ಮಾಡುವಂತೆ ಯುವತಿಯನ್ನು ಒತ್ತಾಯಿಸಿದ್ದ. ಅದಕ್ಕೆ ಯುವತಿ ವಿರೋಧಿಸಿದ್ದರು. ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದಾಗಿ ಹೇಳಿದ್ದ ಆರೋಪಿ ಹಾಗೂ ಆತನ ಸ್ನೇಹಿತರು, ಯುವತಿ ಮೇಲೆ ಮಾಡಿದ್ದರು.’
ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು
ಮನೆಯಿಂದ ತಪ್ಪಿಸಿಕೊಂಡಿದ್ದ ಯುವತಿ, ಸ್ಥಳೀಯ ದಂಪತಿಯೊಬ್ಬರ ಮುಂದೆ ಅಳಲು ತೋಡಿಕೊಂಡಿದ್ದರು. ಅವರ ಸಹಾಯದಿಂದ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಅಸ್ಸಾಂ ಯುವತಿ ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿ ಶಾಹಿದ್‌ವುದ್ದೀನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.