ಪಣಜಿ: ಆರೋಗ್ಯ ಸರಿಯಿಲ್ಲ ಎಂದು ರಜೆ ಪಡೆದು ಪಬ್‍ಗೆ ಹೋಗಿ ಕಂಠಪೂರ್ತಿ ಕುಡಿದು ಉನ್ನತ ಪೋಲಿಸ್ ಅಧಿಕಾರಿಯೊಬ್ಬರು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದ ಬಾಗಾಟದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಲಭ್ಯವಾಗಿರುವ ಮಾಹಿತಿಯ ಅನುಸಾರ, ಎ ಕೋನ್ ಎಂದು ಗುರುತಿಸಲ್ಪಡುವ ಡಿಐಜಿ ಈ ಹಿಂದೆ ದೆಹಲಿ ಪೋಲಿಸ್ ಇಲಾಖೆಯಲ್ಲಿ ಉನ್ನತ ಹುದ್ಧೆಯಲ್ಲಿದ್ದರು ಎಂದು ವರದಿಯಾಗಿದ್ದು, ಇವರು ಗೋವಾದ ಬಾಗಾದಲ್ಲಿ ಡಿಐಜಿ ಕುಡಿದ ಅಮಲಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಘಟನೆಯ ಸಮಯದಲ್ಲಿ ಎ ಕೋನ್ ರವರು ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಅವರು ಕ್ಲಬ್‍ನಲ್ಲಿ ಯುವತಿಯೊಂದಿಗೆ ಜಗಳವಾಡಿದರು. ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದರು ಎನ್ನಲಾಗಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮಹಿಳೆಯೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು ಕೂಡ ಕಾಣಬಹುದಾಗಿದೆ. ಮಹಿಳೆ ಪೋಲಿಸರಿಗೆ ಕಪಾಳಮೋಕ್ಷ ಮಾಡಿದ ಬಳಿಕ ಗಲಾಟೆ ನಡೆದಿದೆ. ಡಿಐಜಿ ರವರು ಘಟನೆಯ ಸಂದರ್ಭದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎನ್ನಲಾಗಿದೆ. ಈ ಘಟನೆಯ ಮಾಹಿತಿ ಪಡೆದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಸಂಬಂಧಿತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಗೋವಾ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಪೋಲಿಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
[vc_row][vc_column]
BREAKING NEWS
- ಕೇರಳದಲ್ಲಿ ನಿಫಾ ವೈರಸ್ ನಿಯಂತ್ರಣ – ನಿರ್ಬಂಧ ಸಡಿಲ
- ಕೆಎಸ್ಒಯು ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಕೇಂದ್ರದ ಸಿಬ್ಬಂದಿಯಿಂದ ಕೃತ್ಯ?
- ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಜಮ್ಮು ಕಾಶ್ಮೀರದ ಡೆಪ್ಯುಟಿ ಎಸ್ಪಿ ಅರೆಸ್ಟ್
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!