ಬೆಂಗಳೂರು: ಬಿಬಿಎಂಪಿ ಸೀಜ್ ಮಾಡಿದ್ದ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರ ಮಾಲಕತ್ವದ ರಾಕ್ಲೈನ್ ಮಾಲ್ ನ ಬೀಗಮುದ್ರೆ ತೆರವಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಬಿಬಿಎಂಪಿ ಅಧಿಕಾರಿಗಳು ಇತ್ತೀಚೆಗೆ ರಾಕ್ಲೈನ್ ಮಾಲ್ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್ಲೈನ್ ವೆಂಕಟೇಶ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಇನನು ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್ಗೆ ಅಧಿಕಾರಿಗಳು ಬೀಗ ಹಾಕಿದ್ದರು.