ರಾಜಸ್ಥಾನ: ದಲಿತ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆ್ಯಸಿಡ್ ಸುರಿದು ಬಾವಿಗೆ ಎಸೆದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಇಲ್ಲಿನ ರೌಲಿ ಜಿಲ್ಲೆಯ ಭಿಲಪದ ಬಳಿಯ ಬಾವಿಯಲ್ಲಿ 19 ವಯಸ್ಸಿನ ಯುವತಿಯ ಶವ ಪತ್ತೆಯಾಗಿದೆ. ಬುಧವಾರ ತಡರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಯುವತಿ, ಇಂದು ಬೆಳಗ್ಗೆ ಬಾವಿಯಲ್ಲಿ ಶವವಾಗಿ ದೊರೆತಿದ್ದಾಳೆ. ಆಕೆಯ ಮೇಲೆ ಅತ್ಯಾಚಾರ ಎಸಗಿ, ಆ್ಯಸಿಡ್ ಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಯಾರೋ ಮುಸುಕುಧಾರಿಗಳು ಬಂದು ತಮ್ಮ ಮಗಳನ್ನು ಹೊತ್ತೂಯ್ದು ಹತ್ಯೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.