ಬೆಂಗಳೂರು: ಈ ಬಾರಿ ನಿರೀಕ್ಷೆಯಂತೆ ರಾಜ್ಯಕ್ಕೆ ಇಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಹೀಗಾಗಿ ವಾಡಿಕೆಗಿಂತ ಒಂದು ವಾರ ಮುಂಚಿತವಾಗಿಯೇ ಆಗಮಿಸಿದಂತಾಗಿದೆ.
ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಅಂದರೆ ಜೂ. 7 ಅಥವಾ 8ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುತ್ತದೆ. ಆದರೆ ಈ ಬಾರಿ ಒಂದು ವಾರ ಮುಂಚಿತವಾಗಿಯೇ ಮುಂಗಾರು ಪ್ರವೇಶಿಸುವ ಸಾದ್ಯತೆಯಿದೆ.
ಇಂದಿನಿಂದ ರಾಜ್ಯದ ಕೆಲ ಕಡೆಗಳಲ್ಲಿ ಮುಂಗಾರು ಮಳೆ ಸುರಿಯುವ ಸಾಧ್ಯತೆಯಿದ್ದು, ಮುಂದಿನ 2-3 ದಿನಗಳಲ್ಲಿ ನೈಋತ್ಯ ಮಾನ್ಸೂನ್ ಪೂರ್ಣ ಪ್ರಮಾಣದಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರವೇ ಮುಂಗಾರು ಮಳೆ ಆರಂಭವಾಗಲಿದೆ. ಈ ಬಾರಿ ವಾಡಿಕೆಗಿಂತ ಬೇಗ ಮಳೆಗಾಲ ಪ್ರಾರಂಭವಾಗಿತ್ತಿರುವುದರಿಂದ ಈ ವರ್ಷ ಅತ್ಯಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.