ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಪಡೆದುಕೊಂಡಿದ್ದು, ರಾಜ್ಯದ ಕರಾವಳಿಯ ಕೆಲ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿಪರೀತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಳನಾಡು ಮತ್ತು ಕರಾವಳಿಯ ಅಲ್ಲಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು IMD ಹೇಳಿದೆ.
ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದ್ದು, ಕೆಲ ಏರಿಯಾಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ.