ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪ್ರದೇಶದಲ್ಲಿ ಐದು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.