ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂ.ಗ್ರಾಮಾಂತರ, ಉಡುಪಿ, ದ.ಕನ್ನಡ, ಉ.ಕನ್ನಡ, ಕೊಡಗು, ಶಿವಮೊಗ್ಗ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಬಳ್ಳಾರಿಯಲ್ಲಿ ಭಾರೀ ಮಳೆಯಾಗಲಿದೆ. ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.