ಬೆಂಗಳೂರು: ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ಬ್ಯಾಟನ್ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು. ಬಳಿಕ ಮಾತನಾಡಿದ ಅಲೋಕ್ ಮೋಹನ್, ಡಿಜಿ ಹಾಗೂ ಐಜಿಪಿ ಆಗಿ ಅಧಿಕಾರ ಸ್ವೀಕರಿಸಿದ್ದೇನೆ. ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಕಾನೂನು ಸುವ್ಯವಸ್ಥೆ ಕರ್ನಾಟಕದಲ್ಲಿ ಸಮರ್ಪಕವಾಗಿ ಇದೆ ಎಂದು ಹೇಳಿದರು.