ಬೆಂಗಳೂರು : ತಡ ರಾತ್ರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ರಾಜಭವನಕ್ಕೆ ಮರಳಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲ ಗೆಹ್ಲೋಟ್ ಅವರು ಡಿಲಕ್ಸ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದು ರಾತ್ರಿ 12.50ಕ್ಕೆ ರಾಜ ಭವನಕ್ಕೆ ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.