ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಹ್ವಾನದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಆಯ್ಕೆ ವಿಚಾರಕ್ಕೆ ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ. ಬಸವರಾಜ್ ಬೊಮ್ಮಾಯಿ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಪಕ್ಷದೊಳಗೆ ಕುತೂಹಲ, ಉತ್ಸಾಹ ಗರಿಗೆದರಿದೆ. ಇಂದು ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದು, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಪಕ್ಷದ ರಾಜ್ಯ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಹೊಸ ಆಸೆ ಚಿಗುರಿದೆ. ಸಂಘಟನೆಗೆ ಬಲ ತುಂಬಲು ಕೊನೆಗೂ ವರಿಷ್ಠರು ಮನಸ್ಸು ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತರ್ಕಿಸಿವೆ.
[vc_row][vc_column]
BREAKING NEWS
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
- ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
- ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ- ಪ್ರಯಾಣಿಕರ ಪರದಾಟ
- ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
- ರಾಜ್ಯದ ಮುಖ್ಯ ಕಾರ್ಯದರ್ಶಿ ಅಜನೀಶ್ ಗೋಯೆಲ್.!
- ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!