ಬೆಂಗಳೂರು : ಚಲಿಸುತಿದ್ದ ಬೈಕ್‌ನಲ್ಲೇ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಅಥಿರಾ ಪುರುಷೋತ್ತಮನ್ ಲೈಂಗಿಕ ಕಿರುಕುಳಕ್ಕೊಳಗಾದ ಯುವತಿ. ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಖಂಡಿಸಿ ನಗರದ ಟೌನ್ ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಯುವತಿ ಅಥಿರಾ ಪುರುಷೋತ್ತಮನ್, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮನೆಗೆ ಹೋಗಲು ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಬೈಕ್ ಟ್ಯಾಕ್ಸಿ ಬಿಟ್ಟು ಬೇರೆ ಬೈಕ್ ತೆಗೆದುಕೊಂಡು ಬಂದಿದ್ದ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಮನೆಗೆ ಹೋಗುವಾಗ ಅನುಚಿತವಾಗಿ ವರ್ತಿಸಿದ್ದಾನಂತೆ. ಆತ ಒಂದು ಕೈಯಲ್ಲಿ ಬೈಕ್ ಚಲಾಯಿಸುತ್ತಾ, ಮತ್ತೊಂದು ಕೈಯಲ್ಲಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಎಂದು ಅಥಿರಾ ಆರೋಪ ಮಾಡಿದ್ದಾಳೆ. ಇದಾದ ಬಳಿಕ ನಾನು ಮನೆಗೆ ಹೋದ ಮೇಲೆಯೂ ಆತ ನನಗೆ ಕರೆ ಮಾಡಿ, ಸಂದೇಶ ಕಳುಹಿಸುತ್ತಿದ್ದ. ಆತನ ಕಿರುಕುಳ ತಾಳಲಾರದೆ ನಂಬರ್ ಬ್ಲಾಕ್ ಮಾಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಯುವತಿ ಲೈಂಗಿಕ ದೌರ್ಜನ್ಯದ ಬಗ್ಗೆ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾಳೆ. ಮಹಿಳೆಯ ಟ್ವೀಟ್‌ಗೆ ಬೆಂಗಳೂರು ನಗರ ಪೊಲೀಸ್ ಪ್ರತಿಕ್ರಿಯಿಸಿ, ಪ್ರಕರಣದ ಬಗ್ಗೆ ನಾವು ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದೇವೆ. ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ದಯವಿಟ್ಟು ನಿಮ್ಮ ಮೊಬೈಲ್ ಸಂಖ್ಯೆಯನ್ನು ಪೊಲೀಸರಿಗೆ ಕಳುಹಿಸಿ ಎಂದು ತಿಳಿಸಿದೆ.
[vc_row][vc_column]
BREAKING NEWS
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?
- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ.!