Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಜಾರಿಗೊಳಿಸುವುದಿಲ್ಲ’ – ಡಿಕೆ ಶಿವಕುಮಾರ್

0

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೊಳಿಸುವುದಿಲ್ಲ. ಬದಲಾಗಿ ಸರ್ಕಾರವು ತನ್ನದೇ ಆದ ರಾಜ್ಯ ಶಿಕ್ಷಣ ನೀತಿಯನ್ನು ಪರಿಚಯಿಸಲು ಯೋಜಿಸಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಎನ್‌ಇಪಿಯನ್ನು ವ್ಯಾಪಕವಾಗಿ ಚರ್ಚಿಸಬೇಕಿತ್ತು. ನಾನು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ. ನಾನು ವಿವಿಧ ಸಂಸ್ಥೆಗಳಲ್ಲಿ ಟ್ರಸ್ಟಿ ಅಥವಾ ಅಧ್ಯಕ್ಷನಾಗಿದ್ದೇನೆ, ಆದರೆ ಈ ಶಿಕ್ಷಣ ನೀತಿಯನ್ನು ಅರ್ಥಮಾಡಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ ಎಂದರು.

ಕಣ್ಣೂರು: ರೈಲಿನಲ್ಲಿ ಬೆಂಕಿ – ಕಿಡಿಗೇಡಿಗಳ ಕೃತ್ಯದ ಶಂಕೆ; ತಪ್ಪಿದ ಭಾರೀ ಅನಾಹುತ

ಇನ್ನು ನಾನು ಎರಡು-ಮೂರು ಬಾರಿ ಅಧ್ಯಯನ ಮಾಡಲು ಪ್ರಯತ್ನಿಸಿದೆ. ಅದರ ಬಗ್ಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿದ್ದರೂ ಅದರ ಒಳ ರಹಸ್ಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಎನ್‌ಇಪಿ ಜಾರಿಗೊಳಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Leave A Reply

Your email address will not be published.