ಬೆಂಗಳೂರಿನಲ್ಲಿ ಕೇಕ್ ಗೆ ಬಳಸುವ ಪದಾರ್ಥಗಳು ಕಲಬೆರಕೆಯಿಂದ ಕೂಡಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲಿಸಿದಾಗ ಕೇಕ್ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.
ಆರೋಗ್ಯ ಸಂಸ್ಥೆ ಪ್ರಕಾರ, ರೆಡ್ ವೆಲ್ವೆಟ್ ಮತ್ತು ಬ್ಲಾಕ್ ಫಾರೆಸ್ಟ್ ಕೇಕ್ ಗಳಲ್ಲಿ ಹೆಚ್ಚಿನ ಪ್ರಮಾಣದ ಕೃತಕ ಬಣ್ಣಗಳನ್ನು ಬಳಸಿರುತ್ತಾರೆ.
ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಈ ಎರಡು ಕೇಕ್ಗಳಿಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ.