ರಾಜ್ಯದಲ್ಲಿ ಅಕ್ರಮ ಪಡಿತರ ಚೀಟಿಗೆ ಕಡಿವಾಣ ಹಾಕಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸದ್ಯ ಮಂಡ್ಯ ಜಿಲ್ಲೆಯಲ್ಲಿ ಕಳೆದ 6 ತಿಂಗಳಿನಿಂದ ರೇಷನ್ ಪಡೆಯದೇ ಇರುವ BPL ಕಾರ್ಡ್ಗಳನ್ನು APL ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ.
ಬರೋಬ್ಬರಿ 8000ಕ್ಕೂ ಅಧಿಕ ಕಾರ್ಡ್ಗಳನ್ನು ಚೇಂಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ರಾಜ್ಯಾದ್ಯಂತ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಕಾರ್ಯಾಚರಣೆ ಬಿರುಸಿನಿಂದ ಸಾಗಿದ್ದು, ಅಕ್ರಮವಾಗಿ ಕಾರ್ಡ್ ಪಡೆದುಕೊಂಡಿರುವವರ ಹೆಸರನ್ನು ಅಧಿಕಾರಿಗಳು ಈಗಾಗಲೇ ಪಟ್ಟಿ ಮಾಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.































