ಚೆನ್ನೈ: ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್ 2023ರ ಭಾಗವಾಗಿ ಶನಿವಾರ ನಡೆದ ರೇಸ್ ವೇಳೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಶ್ರೇಯಸ್ ಹರೀಶ್ (13) ತಲೆಗೆ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಇಂದು ಘಟನೆ ನಡೆದಿದೆ. ಪರಿಣಾಮ ಈವೆಂಟ್ ಮ್ಯಾನೇಜ್‌ಮೆಂಟ್‌ನವರು ಶನಿವಾರ ಮತ್ತು ಭಾನುವಾರದಂದು ನಿಗದಿಯಾಗಿದ್ದ ಉಳಿದ ರೇಸ್‌ಗಳನ್ನು ರದ್ದುಗೊಳಿಸಿದ್ದಾರೆ. ಶ್ರೇಯಸ್ ಹರೀಶ್ ರಾಷ್ಟ್ರಮಟ್ಟದಲ್ಲಿ ಹಲವಾರು ರೇಸ್‌ಗಳನ್ನು ಗೆದ್ದಿದ್ದರು. ಭಾರತೀಯ ಬೈಕ್ ರೇಸರ್ ಶ್ರೇಯಸ್ ಹರೀಶ್ ಬೆಂಗಳೂರಿನವರು. ಅವರು ‘ಬೆಂಗಳೂರು ಕಿಡ್’ ಎಂದು ಜನಪ್ರಿಯರಾಗಿದ್ದರು. ಒಂಬತ್ತನೇ ವಯಸ್ಸಿನಲ್ಲಿ ಬೈಕಿಂಗ್ ಪ್ರಾರಂಭಿಸಿದ್ದರು. 6ನೇ ತರಗತಿಯಲ್ಲಿ ಓದುತ್ತಿದ್ದ ಶ್ರೇಯಸ್ ಕಳೆದ ವರ್ಷ, FIM ಮಿನಿಜಿಪಿ ವರ್ಲ್ಡ್ ಸೀರೀಸ್ ಇಂಡಿಯಾದ ಉದ್ಘಾಟನಾ ಆವೃತ್ತಿಯನ್ನು ಗೆದ್ದಿದ್ದರು.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ