ಬೆಂಗಳೂರು: ಚಿತ್ರದುರ್ಗ ಮತ್ತು ಬೀದರ್ ಜಿಲ್ಲೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗದ ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಲೀಲಾವತಿ ಹಾಗು ಬಿಲ್ ಕಲೆಕ್ಟರ್ ನಿಶಾಂತ್, ನಾಗರಾಜ್ ಎಂಬಾತರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೀದರ್ ಜಿಲ್ಲೆ ಬಸವಕಲ್ಯಾಣದ ಮುಡಬಿ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಬಳಿ ₹25 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.