ರಜೆಯ ಮೇಲೆ ಮನೆಗೆ ತೆರಳಿದಾಗ ನಾಪತ್ತೆ ಆಗಿದ್ದ ಸೇನೆಯ ಭಾರತೀಯ ಯೋಧನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಯೋಧ ಜಾವೇದ್ ಅಹ್ಮದ್ ವಾನಿಯನ್ನು ಕುಲ್ಗಾಂ ಪೊಲೀಸರು ರಕ್ಷಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಮುಂದಿನ ವಿಚಾರಣೆ ನಡೆಸಲಾಗುತ್ತದೆ’ ಎಂದು ಜಮ್ಮು-ಕಾಶ್ಮೀರ ಪೊಲೀಸರು ಹೇಳಿದ್ದಾರೆ. ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ ಆತಂಕವಿತ್ತು. ಆದರೆ ಯಾವುದೇ ಉಗ್ರಗಾಮಿ ಸಂಘಟನೆಗಳು ಅವರ ಅಪಹರಣದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ. ಲಡಾಖ್ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಜು.29ರ ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದರು. ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯಾಗಿತ್ತು ಇದರಿಂದ ಇನ್ನೂ ಆತಂಕ ಹೆಚ್ಚಾಗಿತ್ತು. ಹುಡುಕಾಟ ನಡೆಸುವಂತೆ ಆತನ ಕುಟುಂಬ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
[vc_row][vc_column]
BREAKING NEWS
- ಮೇಕದಾಟು ಅಣೆಕಟ್ಟು ನಿರ್ಮಾಣ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ: ಸಚಿವ ಕೆ.ಹೆಚ್.ಮುನಿಯಪ್ಪ.!
- ನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ?
- -ಮಾರೇಶ್ವರೊಡೆಯರು ಅವರ ವಚನ .!
- ಉದ್ಯೋಗಿಯಿಂದ ಮಹಾನ್ ಎಡವಟ್ಟು – ಮೈಕ್ರೋಸಾಫ್ಟ್ ನ 32ಟಿಬಿ ಮಾಹಿತಿ ಸೋರಿಕೆ
- ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
- ನಿಂಜಾ ಪ್ರಶಸ್ತಿ ಪಡೆದ 71 ವರ್ಷದ ಮಹಿಳೆಯ ಗಿನ್ನಿಸ್ ದಾಖಲೆ!
- ಹೊಸ ಐಫೋನ್ ಖರೀದಿಗೆ ಮುಗಿಬಿದ್ದ ಜನ – ಈ ಫೋನ್ ನಲ್ಲಿ ಅಂಥಾದ್ದೇನಿದೆ?
- ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕುರಿತ ಸ್ಪೋಟಕ ಮಾಹಿತಿ ಬಹಿರಂಗ?
- ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕಮಗುವನ್ನು ಬೇಟೆಯಾಡುತ್ತಿದ್ದಾರೆ -ಕಮಲ್ ಹಾಸನ್
- ಮುಂಬೈ ಜಿಎಸ್ ಬಿ ಗಣೇಶೋತ್ಸವದಲ್ಲಿ ಪಾಲ್ಗೊಂಡ ಕರಾವಳಿ ಬೆಡಗಿ ನಟಿ ಪೂಜಾ ಹೆಗ್ಡೆ