ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.
ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ