ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ರಾಜ್ಯ ಮುಕ್ತ ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದೆ. ಎರಡು ಆಟೋ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. 6 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.